Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:19 - ಪರಿಶುದ್ದ ಬೈಬಲ್‌

19 “ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪಾಳುಬಿದ್ದ ನಿನ್ನ ಪ್ರದೇಶಗಳು ಬೀಳುಬಿದ್ದ ನಿನ್ನ ಭೂಮಿಗಳು ಕೆಡವಿಬಿದ್ದ ನಿನ್ನ ಬೀಡುಗಳು ಕಿಕ್ಕಿರಿದಾಗುವುವು ನಿನ್ನ ನಿವಾಸಿಗಳಿಗೆ; ನಿನ್ನ ಕಬಳಿಸಿದವರು ದೂರವಾಗುವರು ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂವಿುಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವದೆಂದರೆ - ನೋಡು, ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:19
24 ತಿಳಿವುಗಳ ಹೋಲಿಕೆ  

ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”


ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


“ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’”


ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.


ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”


ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.”


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.


ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.


ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು