Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:2 - ಪರಿಶುದ್ದ ಬೈಬಲ್‌

2 ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:2
20 ತಿಳಿವುಗಳ ಹೋಲಿಕೆ  

ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.


ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.


ನನ್ನ ಮಹಿಮೆಯು ಆ ಸ್ಥಳದ ಮೂಲಕ ದಾಟಿಹೋಗುವುದು. ನಾನು ನಿನ್ನನ್ನು ಆ ಬಂಡೆಯ ದೊಡ್ಡದಾದ ಬಿರುಕಿನಲ್ಲಿ ಇರಿಸುವೆನು; ನಾನು ದಾಟಿ ಹೋಗುವಾಗ ನನ್ನ ಕೈಯಿಂದ ನಿನ್ನನ್ನು ಮುಚ್ಚುವೆನು.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು. ಹೊಳೆಯುವ ನಿನ್ನ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವದನ್ನು ನಿಲ್ಲಿಸಿದವು. ಆ ಮಿಂಚುಗಳು ಗಾಳಿಯಲ್ಲಿ ತೂರಿಬರುವ ಭರ್ಜಿ, ಬಾಣಗಳಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು