Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:21 - ಪರಿಶುದ್ದ ಬೈಬಲ್‌

21 ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:21
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.


ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.


ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.


ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.


ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.


ಜನರನ್ನು ನೋಡು! ಆಕಾಶದ ಮೋಡವು ಹಾರಿಹೋಗುವಂತೆ ಅವರು ನಿನ್ನ ಬಳಿಗೆ ತ್ವರಿತವಾಗಿ ಬರುತ್ತಿದ್ದಾರೆ. ತಮ್ಮ ಗೂಡುಗಳಿಗೆ ಹಾರುವ ಪಾರಿವಾಳಗಳಂತೆ ಅವರಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು