ಯೆಶಾಯ 49:24 - ಪರಿಶುದ್ದ ಬೈಬಲ್24 ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀನು ಅವನಿಂದ ಕಿತ್ತುಕೊಳ್ಳಲಾರೆ. ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ ಆ ಕೈದಿಯು ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯವರನ್ನು ಬಿಡಿಸಬಹುದೋ? ಅಧ್ಯಾಯವನ್ನು ನೋಡಿ |
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.