ಯೆಶಾಯ 49:4 - ಪರಿಶುದ್ದ ಬೈಬಲ್4 ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.