ಯೆಶಾಯ 49:6 - ಪರಿಶುದ್ದ ಬೈಬಲ್6 ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.” ಅಧ್ಯಾಯವನ್ನು ನೋಡಿ |
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.