ಯೆಶಾಯ 49:8 - ಪರಿಶುದ್ದ ಬೈಬಲ್8 ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?