Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:13 - ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:13
26 ತಿಳಿವುಗಳ ಹೋಲಿಕೆ  

“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಆ ಸಮಯದಲ್ಲಿ ಸುಂದರವಾದ ತರುಣತರುಣಿಯರು ದಾಹದಿಂದ ಬಳಲುವರು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.


ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.


“ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.


ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟಮಾಡುವರು. ಆದರೆ ದುಷ್ಟಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟಜನರಾದ ನೀವು ಬಾಯಾರಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟಜನರಾದ ನೀವಾದರೋ ನಾಚಿಕೆಗೆ ಒಳಗಾಗುವಿರಿ.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು