ಯೆಶಾಯ 5:16 - ಪರಿಶುದ್ದ ಬೈಬಲ್16 ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”