ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”