ಯೆಶಾಯ 5:19 - ಪರಿಶುದ್ದ ಬೈಬಲ್19 ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!” ಅಧ್ಯಾಯವನ್ನು ನೋಡಿ |
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”