ಯೆಶಾಯ 5:20 - ಪರಿಶುದ್ದ ಬೈಬಲ್20 ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ! ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.