Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:23 - ಪರಿಶುದ್ದ ಬೈಬಲ್‌

23 ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:23
22 ತಿಳಿವುಗಳ ಹೋಲಿಕೆ  

ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.


ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ಕೆಟ್ಟ ನಿಯಮವನ್ನು ಬರೆಯುವ ನ್ಯಾಯಶಾಸ್ತ್ರಿಗಳನ್ನು ನೋಡಿರಿ. ಆ ನ್ಯಾಯಶಾಸ್ತ್ರಿಗಳು ಜನರಿಗೆ ಕಷ್ಟವಾಗಿರುವ ನಿಯಮಗಳನ್ನೇ ಮಾಡುತ್ತಾರೆ.


ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.


ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.


ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು