ಯೆಶಾಯ 5:30 - ಪರಿಶುದ್ದ ಬೈಬಲ್30 ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು. ಅಧ್ಯಾಯವನ್ನು ನೋಡಿ |
ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.