Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:4 - ಪರಿಶುದ್ದ ಬೈಬಲ್‌

4 ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:4
15 ತಿಳಿವುಗಳ ಹೋಲಿಕೆ  

“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?


ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು.


ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು