ಯೆಶಾಯ 5:5 - ಪರಿಶುದ್ದ ಬೈಬಲ್5 “ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.