Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:6 - ಪರಿಶುದ್ದ ಬೈಬಲ್‌

6 ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:6
32 ತಿಳಿವುಗಳ ಹೋಲಿಕೆ  

ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


“ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ಯೆರೆಮೀಯನೇ, “ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಇದು ಕ್ಷಾಮದ ಬಗ್ಗೆ ಯೆರೆಮೀಯನಿಗೆ ಯೆಹೋವನು ನುಡಿದ ಸಂದೇಶ:


ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.


ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


“ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.


ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.


ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.


ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.


“ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ಆ ಮಿಡತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶಮಾಡುವವು. ನನ್ನ ಮರಗಳ ತೊಗಟೆಗಳನ್ನು ಮಿಡತೆಗಳು ತಿಂದುಬಿಡುವವು. ಅದರ ಕೊಂಬೆಗಳು ಬಿಳುಪಾಗುವವು. ಮರಗಳು ನಾಶವಾಗುವವು.


ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು