ಯೆಶಾಯ 5:7 - ಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು. ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.