ಯೆಶಾಯ 5:8 - ಪರಿಶುದ್ದ ಬೈಬಲ್8 ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ! ಅಧ್ಯಾಯವನ್ನು ನೋಡಿ |