Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:9 - ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:9
14 ತಿಳಿವುಗಳ ಹೋಲಿಕೆ  

ಈಗ ನಿನ್ನ ಮನೆಯು ಸಂರ್ಪೂಣವಾಗಿ ಬರಿದಾಗಿಬಿಟ್ಟಿದೆ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಪಾಳುಬಿದ್ದಿರುವ ಮನೆಗಳಲ್ಲಿ ದುಷ್ಟನು ವಾಸಿಸುವನು. ಹಾಳುದಿಬ್ಬಗಳಾಗಬೇಕೆಂಬುದೇ ಆ ಮನೆಗಳ ಗತಿಯಾಗಿದೆ.


ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ. ಅವನ ಅಭಿವೃದ್ಧಿಯು ನಿಂತುಹೋಗುವುದು.


ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು