ಯೆಶಾಯ 50:10 - ಪರಿಶುದ್ದ ಬೈಬಲ್10 ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.