Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:11 - ಪರಿಶುದ್ದ ಬೈಬಲ್‌

11 “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:11
30 ತಿಳಿವುಗಳ ಹೋಲಿಕೆ  

ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.


ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು