ಯೆಶಾಯ 50:2 - ಪರಿಶುದ್ದ ಬೈಬಲ್2 ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.