Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:8 - ಪರಿಶುದ್ದ ಬೈಬಲ್‌

8 ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:8
16 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


ಯೆಹೋವನು ಹೇಳುವುದೇನೆಂದರೆ: “ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ!


ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.


ಯಾಕೋಬ್ಯರ ಅರಸನಾದ ಯೆಹೋವನು ಹೇಳುವುದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.


ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಾಧೀಶರನ್ನು ಕಾಣಬೇಕು.


“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.


ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.


ಯೆಹೋವನೇ, ನೀನು ನನಗೆ ಸಮೀಪವಾಗಿರುವೆ. ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು