Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:11 - ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:11
29 ತಿಳಿವುಗಳ ಹೋಲಿಕೆ  

ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.


ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.


ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.


ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು