Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:12 - ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:12
37 ತಿಳಿವುಗಳ ಹೋಲಿಕೆ  

ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


“ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.


ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು. ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ.


ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.


ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು.


ಆದ್ದರಿಂದ ದಾವೀದನು ಆಕೀಷನ ಮತ್ತು ಅವನ ಅಧಿಕಾರಿಗಳ ಎದುರಿನಲ್ಲಿ ಹುಚ್ಚನಂತೆ ನಟಿಸಿದನು. ದಾವೀದನು ಅವರೊಂದಿಗೆ ಇರುವಾಗಲೆಲ್ಲ ಹುಚ್ಚನಂತೆ ವರ್ತಿಸಿದನು. ಅವನು ದ್ವಾರದ ಬಾಗಿಲುಗಳ ಮೇಲೆ ಉಗುಳಿದನು; ಅವನ ಜೊಲ್ಲು ಗಡ್ಡದವರೆಗೂ ಸುರಿಯುವಂತೆ ಮಾಡಿಕೊಂಡನು.


“ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು