ಯೆಶಾಯ 51:16 - ಪರಿಶುದ್ದ ಬೈಬಲ್16 “ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಕಾಶವನ್ನು ನಿಲ್ಲಿಸಬೇಕೆಂತಲೂ ಭೂಲೋಕವನ್ನು ಸ್ಥಾಪಿಸಬೇಕೆಂತಲೂ ಚೀಯೋನಿಗೆ ನೀನು ನನ್ನ ಜನವೆಂದು ಹೇಳಬೇಕೆಂತಲೂ ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.” ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”