ಯೆಶಾಯ 51:18 - ಪರಿಶುದ್ದ ಬೈಬಲ್18 ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡೆಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೆತ್ತ ಮಕ್ಕಳಲ್ಲೆಲ್ಲಾ ಅವಳನ್ನು ಕರೆದುಕೊಂಡು ಹೋಗುವವನು ಯಾರೂ ಇಲ್ಲ; ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವಳು ಹೆತ್ತ ಎಲ್ಲಾ ಪುತ್ರರಲ್ಲಿ ಅವಳನ್ನು ನಡೆಸುವುದಕ್ಕೆ ಒಬ್ಬನೂ ಇಲ್ಲ. ಅವಳು ಬೆಳೆಯಿಸಿದ ಎಲ್ಲಾ ಪುತ್ರರಲ್ಲಿ, ಅವಳ ಕೈಯನ್ನು ಹಿಡಿಯುವವನು ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿ |