Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:19 - ಪರಿಶುದ್ದ ಬೈಬಲ್‌

19 ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಹತಾಪದಿಂದ ನಿನಗಾಗಿ ಬಡುಕೊಳ್ಳುವವರು ಯಾರಿದ್ದಾರೆ? ನಿನಗೆ ಈ ಎರಡು ಬಾಧೆಗಳು ಬಂದಿವೆ, [ನಿನ್ನ ದೇಶವು] ಹಾಳುಪಾಳಾಗಿದೆ, [ನಿನ್ನ ಪ್ರಜೆಗೆ] ಕ್ಷಾಮವೂ ಖಡ್ಗವೂ ಪ್ರಾಪ್ತವಾಗಿವೆ; ನಾನು ನಿನ್ನನ್ನು ಹೇಗೆ ಸಂತೈಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:19
26 ತಿಳಿವುಗಳ ಹೋಲಿಕೆ  

ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.


ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”


ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಅವಮಾನವು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.


ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


“ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.


ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”


ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”


ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”


ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು