Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:20 - ಪರಿಶುದ್ದ ಬೈಬಲ್‌

20 ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಯಂತೆ ಬೀದಿಗಳೆಲ್ಲಾ ಕೂಡುವ ಚೌಕದಲ್ಲಿ ಬಿದ್ದಿದ್ದಾರೆ; ಯೆಹೋವನ ರೋಷವನ್ನೂ ನಿನ್ನ ದೇವರ ತರ್ಜನವನ್ನೂ ಹೊಟ್ಟೆ ತುಂಬಾ ಕುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:20
27 ತಿಳಿವುಗಳ ಹೋಲಿಕೆ  

ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬ ತಿನ್ನಿರಿ; ಅಮಲೇರುವ ತನಕ ರಕ್ತವನ್ನು ಕುಡಿಯಿರಿ.


ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.


ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ.


ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೋ ಎಂಬಂತೆ ಪರಿಗಣಿಸಿದ್ದಾರೆ.


ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ಜೆರುಸಲೇಮೇ, ನನಗೆ ಕಿವಿಗೊಡು. ನೀನು ಅಮಲೇರಿದವಳಂತೆ ಶಕ್ತಿಹೀನಳಾಗಿರುವೆ. ನೀನು ಕುಡಿದು ಅಮಲೇರುವುದು ದ್ರಾಕ್ಷಾರಸದಿಂದಲ್ಲ, “ವಿಷದಿಂದಷ್ಟೇ.”


ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.


ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಜಿಂಕೆ, ದುಪ್ಪಿ, ಸಾರಂಗ, ಕಾಡುಕುರಿ, ಕಾಡುಮೇಕೆ, ಕಡವೆ, ಬೆಟ್ಟದ ಆಡು ಇವುಗಳನ್ನು ತಿನ್ನಬಹುದು.


ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.


“ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು.


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು