ಯೆಶಾಯ 51:22 - ಪರಿಶುದ್ದ ಬೈಬಲ್22 ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.