ಯೆಶಾಯ 51:23 - ಪರಿಶುದ್ದ ಬೈಬಲ್23 ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.” ಅಧ್ಯಾಯವನ್ನು ನೋಡಿ |