ಯೆಶಾಯ 51:3 - ಪರಿಶುದ್ದ ಬೈಬಲ್3 ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.