ಯೆಶಾಯ 51:4 - ಪರಿಶುದ್ದ ಬೈಬಲ್4 “ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿ |
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.