Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:5 - ಪರಿಶುದ್ದ ಬೈಬಲ್‌

5 ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:5
39 ತಿಳಿವುಗಳ ಹೋಲಿಕೆ  

ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.


ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.


ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.


ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ದೇವರ ನುಡಿಯು ನಿಮ್ಮ ಬಳಿಯಲ್ಲಿಯೇ ಇದೆ. ಅದು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಆದ್ದರಿಂದ ಅವುಗಳಿಗೆ ಕಷ್ಟವಿಲ್ಲದೆ ವಿಧೇಯರಾಗಬಹುದು.


ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು