Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:7 - ಪರಿಶುದ್ದ ಬೈಬಲ್‌

7 ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:7
23 ತಿಳಿವುಗಳ ಹೋಲಿಕೆ  

ಯೆಹೋವನ ಉಪದೇಶವು ನೀತಿವಂತನ ಹೃದಯದಲ್ಲಿರುತ್ತದೆ. ಅವನು ನೀತಿಮಾರ್ಗದಲ್ಲಿ ನಡೆಯವನು.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.


ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ನಾನೀಗ ಕೊಡುವ ಆಜ್ಞೆಗಳನ್ನು ಯಾವಾಗಲೂ ನಿಮ್ಮ ಜ್ಞಾಪದಲ್ಲಿಟ್ಟುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು