ಯೆಶಾಯ 52:1 - ಪರಿಶುದ್ದ ಬೈಬಲ್1 ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”