Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:12 - ಪರಿಶುದ್ದ ಬೈಬಲ್‌

12 ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:12
23 ತಿಳಿವುಗಳ ಹೋಲಿಕೆ  

ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’


ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.


ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.


ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು.


ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.


“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.


ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.


ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.


ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.


ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು.


ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.


ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊದುತ್ತಿದ್ದರು.


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವದು.


ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.


ಜನರು ನದಿ ದಾಟಿದ ಮೇಲೆ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಜನರ ಮುಂದಗಡೆಯಲ್ಲಿ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು