ಯೆಶಾಯ 52:13 - ಪರಿಶುದ್ದ ಬೈಬಲ್13 ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.