ಯೆಶಾಯ 52:5 - ಪರಿಶುದ್ದ ಬೈಬಲ್5 ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”