Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:7 - ಪರಿಶುದ್ದ ಬೈಬಲ್‌

7 ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:7
30 ತಿಳಿವುಗಳ ಹೋಲಿಕೆ  

ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ.


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ಈ ಸಂಗತಿಗಳು ಸಂಭವಿಸುವುದಕ್ಕಿಂತ ಮೊದಲು ನೀವು ಜನರಿಗೆಲ್ಲ ಸುವಾರ್ತೆಯನ್ನು ತಿಳಿಸಬೇಕು.


ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಅಗೋ, ನನ್ನ ಪ್ರಿಯನ ಸ್ವರ! ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ ಗುಡ್ಡಗಳ ಮೇಲೆ ಕುಪ್ಪಳಿಸುತ್ತಾ ಬರುತ್ತಿದ್ದಾನೆ.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.


ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”


ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.


ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.


ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.


ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು