ಯೆಶಾಯ 53:1 - ಪರಿಶುದ್ದ ಬೈಬಲ್1 ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿಕೊಂಡವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು? ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.