ಯೆಶಾಯ 53:10 - ಪರಿಶುದ್ದ ಬೈಬಲ್10 ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು. ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.