ಯೆಶಾಯ 53:11 - ಪರಿಶುದ್ದ ಬೈಬಲ್11 ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು. ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.