ಯೆಶಾಯ 53:7 - ಪರಿಶುದ್ದ ಬೈಬಲ್7 ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಅಧ್ಯಾಯವನ್ನು ನೋಡಿ |