ಯೆಶಾಯ 53:8 - ಪರಿಶುದ್ದ ಬೈಬಲ್8 ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು. ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.