Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:10 - ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:10
33 ತಿಳಿವುಗಳ ಹೋಲಿಕೆ  

ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಯೆಹೋವನು ಹೀಗೆನ್ನುತ್ತಾನೆ, “ಆ ಒಡಂಬಡಿಕೆಯನ್ನು ನಾನು ಲೇವಿಯರೊಂದಿಗೆ ಮಾಡಿದೆನು. ನಾನು ಅವನಿಗೆ ಜೀವ ಮತ್ತು ಸಮಾಧಾನವನ್ನು ವಾಗ್ದಾನ ಮಾಡಿ ಅವನಿಗೆ ಅದನ್ನು ಕೊಟ್ಟೆನು. ಲೇವಿಯು ನನ್ನನ್ನು ಘನಪಡಿಸಿದನು. ನನ್ನ ಹೆಸರನ್ನು ಗೌರವಿಸಿದನು.


ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


“ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.


ಆಕಾಶವು ವಿಭಾಗಗೊಂಡು ಸುರುಳಿಯಂತೆ ಸುತ್ತಲ್ಪಟ್ಟಿತು. ಪ್ರತಿಯೊಂದು ಬೆಟ್ಟ ಮತ್ತು ದ್ವೀಪಗಳು ತಮ್ಮ ನೆಲೆಯಿಂದ ಚಲಿಸಿದವು.


ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು;


ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.”


ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವುಗಳು ಶಾಶ್ವತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಬಹುದಾದರೆ


ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.


ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.


ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು