Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:11 - ಪರಿಶುದ್ದ ಬೈಬಲ್‌

11 “ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:11
43 ತಿಳಿವುಗಳ ಹೋಲಿಕೆ  

ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.


“ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.”


ಜೆರುಸಲೇಮೇ, ನನಗೆ ಕಿವಿಗೊಡು. ನೀನು ಅಮಲೇರಿದವಳಂತೆ ಶಕ್ತಿಹೀನಳಾಗಿರುವೆ. ನೀನು ಕುಡಿದು ಅಮಲೇರುವುದು ದ್ರಾಕ್ಷಾರಸದಿಂದಲ್ಲ, “ವಿಷದಿಂದಷ್ಟೇ.”


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.


ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.


“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.


ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”


ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.


ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು.


ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ನಾನು ಅಮೂಲ್ಯವಾದ ಕಲ್ಲುಗಳಿಂದ ಗೋಡೆಯನ್ನು ಕಟ್ಟುವೆನು.


ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.


ಈ ಎರಡು ಕೊಠಡಿಗಳ ನೆಲಕ್ಕೆ ಚಿನ್ನದ ತಗಡನ್ನು ಹಾಸಿದ್ದರು.


ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು