Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:12 - ಪರಿಶುದ್ದ ಬೈಬಲ್‌

12 ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ನಾನು ಅಮೂಲ್ಯವಾದ ಕಲ್ಲುಗಳಿಂದ ಗೋಡೆಯನ್ನು ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರರತ್ನಗಳಿಂದ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ಮತ್ತು ನಿನ್ನ ಮೇರೆಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:12
8 ತಿಳಿವುಗಳ ಹೋಲಿಕೆ  

“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ ಮತ್ತು ಧೂಮ್ರಮಣಿಗಳಿರಬೇಕು.


ಗೋಡೆಯ ಪ್ರತಿಯೊಂದು ಕಡೆಯಲ್ಲಿ ಮೂರು ಸಾಲು ಕಿಟಕಿಗಳಿದ್ದವು. ಈ ಕಿಟಕಿಗಳು ಎದುರು ಬದುರಾಗಿದ್ದವು.


ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ.


ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು