Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:16 - ಪರಿಶುದ್ದ ಬೈಬಲ್‌

16 “ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನುಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳು ಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:16
14 ತಿಳಿವುಗಳ ಹೋಲಿಕೆ  

ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕರನ್ನು ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


“ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.


ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ನನಗೆ ನಾಲ್ಕು ಮಂದಿ ಕೆಲಸಗಾರರನ್ನು ತೋರಿಸಿದನು.


ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು